ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಕೊರೊನಾ ನಿಧಾನವಾಗಿ ಏರಿಕೆ: ಇಂದು 1,432 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಮತ್ತೆ ಏರಿಕೆ ಕಾಣುತ್ತಿದೆ. ಸೋಮವಾರ 1,065, ಮಂಗಳವಾರ 1,298 ಹಾಗೂ ನಿನ್ನೆ (ಬುಧವಾರ) 1,365 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದರೆ, ಇಂದು 1,432 ಜನರಿಗೆ ಸೋಂಕು ದೃಢಪಟ್ಟಿದೆ.

ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈವರೆಗೂ 29,34,624 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.80ಕ್ಕೆ ಕುಸಿದಿದೆ. ಇಂದು 1,76,977 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 1,538 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 28,76,377 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 27 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,088ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 21,133 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.88%ನಷ್ಟಿದೆ.

ಬೆಂಗಳೂರು: ನಗರದಲ್ಲಿ ಇಂದು 318 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,34,157ಕ್ಕೆ ಏರಿಕೆಯಾಗಿದೆ 294 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,10,259ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 15,955 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,942 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

19/08/2021 06:44 pm

Cinque Terre

32.41 K

Cinque Terre

0