ಚಿತ್ರದುರ್ಗ : ಕೊರೊನಾ ಮೂರನೇ ಅಲೆ ಎದುರಿಸಲು ಈಗಾಗಲೇ ತಾಲೂಕಿನಲ್ಲಿ ಎಲ್ಲ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು. ಅವರು ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆ ಹಿಂಭಾಗದಲ್ಲಿ ನಿರ್ಮಿಸುತ್ತಿರುವ ಆಕ್ಸಿಜನ್ ಪ್ಲಾಂಟ್ ಘಟಕ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ಆಕ್ಸಿಜನ್ ಪ್ಲಾಂಟ್ ಘಟಕದ ಕಾಮಗಾರಿ ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ತಿಳಿಸಿದರು.
ಮುಂದಿನ ತಿಂಗಳು 8 ರಂದು ತಾಲ್ಲೂಕಿನ ಪಟ್ರೆಹಳ್ಳಿ ಸಮೀಪ 25 ಕೋಟಿ ವೆಚ್ಚದಲ್ಲಿ 100 ಬೆಡ್ ಆಸ್ಪತ್ರೆ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ನೆರವೇರಿಸಲಾಗುವುದು, ಸಿದ್ದತೆ ಮಾಡಿಕೊಳ್ಳಿ ಎಂದು ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
PublicNext
26/08/2021 03:19 pm