ಯಾದಗಿರಿ: ಬನ್ರೀ ಕಾಕಾ ಲಸಿಕೆ ಹಾಕಿಸಿಕೊಳ್ರಿ.. ನಿಮ್ಮ ಅರೋಗ್ಯನಾ ಕಾಪಾಡಿಕೊಳ್ರಿ..ಹಿಂಗಾ ಮನೆ.. ಮೆನೆಗೆ ಹೋಗಿ ಕೋವಿಡ್ 19 ಲಸಿಕಾಕಾರಣಕ್ಕೆ ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರು ಶ್ರಮಿಸುತ್ತಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಬೈರಿಮಡ್ಡಿ ಗ್ರಾಮದಲ್ಲಿ ಇಂದು ಅರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ಜನರಿಗೆ ಲಸಿಕೆ ಹಾಕುತ್ತಿದ್ದು, ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರೋ ಜನರಿಗೆ ತಹಶೀಲ್ದಾರ್ ಸುಬ್ಬಣ್ಣ ಅವರು, ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕಿಸಿಕೊಳ್ಳುವಂತೆ ಜನರಿಗೆ ತಿಳಿ ಹೇಳಿದರು.
ಇನ್ನು ತಾಲ್ಲೂಕಿನಾದ್ಯಂತ ಈ ಲಸಿಕಾಕಾರಣಕ್ಕೆ ಫ್ರಂಟ್ ಲೈನ್ ವಾರಿಯರ್ಸ್ ಗಳಾದ ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಂದಾಯ ಇಲಾಖೆ ಹಾಗೂ ಅಂಗನವಾಡಿ ಆಶಾಕಾರ್ಯಕರ್ತೆಯರು ಕಳೆದ ಮೂರು ತಿಂಗಳಿನಿಂದ ಶ್ರಮಿಸುತ್ತಿದ್ದಾರೆ.
ಈ ಸಂಧರ್ಭದಲ್ಲಿ ಡಾ. ಅಲಾವುದ್ದೀನ್, ಪಿಡಿಓ ಸತೀಶ್ ಆಲಗೂರು, ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್ ಕುಮಾರ, ಅರೋಗ್ಯ ಸಹಾಯಕಿ ಬಸೀರಾ ಬಾನು, ಗ್ರಾಮ ಪಂಚಾಯಿತಿ ಸದಸ್ಯ ರವಿ ನಾಯಕ ಬೈರಿಮಡ್ಡಿ, ಕರವೇ ತಾಲ್ಲೂಕು ಅಧ್ಯಕ್ಷ ವೆಂಕಟೇಶ್ ನಾಯಕ ಬೈರಿಮಡ್ಡಿ ಸೇರಿದಂತೆ ಗ್ರಾಮದ ಜನರು ಇದ್ದರು.
-ಮೌನೇಶ ಬಿ.ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
PublicNext
01/09/2021 01:56 pm