ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಾಚಗುಂಡಾಳ ಗ್ರಾಮದಲ್ಲಿ ರಾತ್ರಿಯಿಂದ ಕಾಲರಾ ರೋಗ ವ್ಯಾಪಕವಾಗಿ ಹರಡಿದ್ದು, ವಾಂತಿ ಭೇದಿಯಿಂದ ಸುಮಾರು ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.
ಇನ್ನು 50 ಕ್ಕೂ ಹೆಚ್ಚು ಜನ ಸುರಪೂರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ ರೋಗಿಗಳಿಗೆ ದೇವರಗೋನಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಈ ಕಾಲರಾ ರೋಗ ಹೆಚ್ಚಾಗಿ ಉಲ್ಬಣಿಸಿದ್ದು, ಮಾಚಗುಂಡಾಳ ಗ್ರಾಮದಲ್ಲಿಯೇ ವೈದ್ಯಾಧಿಕಾರಿಗಳು ತುರ್ತು ಚಿಕಿತ್ಸಾ ಕೇಂದ್ರ ಏರ್ಪಡಿಸಿ ಸ್ಥಳದಲ್ಲಿಯೇ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ರಾಜಾ ವೆಂಕಪ್ಪ ನಾಯಕ ಅವರಿಗೆ ಬಿಜೆಪಿ ಮುಖಂಡ ವೆಂಕಟೇಶ ನಾಯಕ ಭೈರಿಮಡ್ಡಿ ಅವರು ಆಗ್ರಹಿಸಿದ್ದಾರೆ.
ಅಲ್ಲದೆ ಗ್ರಾಮದ ತುಂಬೆಲ್ಲಾ ಫಾಗಿಂಗ್ ಹಾಗೂ ಬ್ಲೀಚಿಂಗ್ ಪೌಡರ್ ಸಿಂಪಡಿಸಿ ಕಲುಷಿತ ನೀರನ್ನು ಸ್ವಚ್ಛಗೊಳಿಸಿ ಕೂಡಲೇ ಗ್ರಾಪಂ ಸಿಬ್ಬಂದಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಇನ್ನುಇಂದು ಬೆಳಗ್ಗೆ ಸುರಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ರೋಗಿಗಳ ಅರೋಗ್ಯವನ್ನ ವೆಂಕಟೇಶ ನಾಯಕ ಭೈರಿಮಡ್ಡಿ ಹಾಗೂ ಸಂಬಂಧಿಕರು ವಿಚಾರಿಸಿದರು.
-ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
PublicNext
14/09/2021 10:10 am