ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಾಚಗುಂಡಾಳ ಗ್ರಾಮದಲ್ಲಿ ರಾತ್ರಿಯಿಂದ ಕಾಲರಾ ರೋಗ ವ್ಯಾಪಕವಾಗಿ ಹರಡಿದ್ದು, ವಾಂತಿ ಭೇದಿಯಿಂದ ಸುಮಾರು ನೂರಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮಕ್ಕೆ ತಾಲ್ಲೂಕು ವೈದ್ಯಾಧಿಕಾರಿ ಆರ್. ವಿ. ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ 40 ಜನ ಸುರಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನುಳಿದವರು ಚಿಕಿತ್ಸೆಗೆಂದು
ಯಾದಗಿರಿ ಹಾಗೂ ಶಹಾಪುರ ಆಸ್ಪತ್ರೆಗಳಿಗೆ ತೆರಳಿದ್ದಾರೆ.
ಇನ್ನು ಗ್ರಾಮದಲ್ಲಿ ಕ್ಯಾಂಪ್ ಮಾಡಿ ಜನರಿಗೆ ಚಿಕಿತ್ಸೆ ನೀಡಬೇಕು. ಈ ಬಗ್ಗೆ ಸಂಭಂದಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಅಂತಾ ಕರವೇ ತಾಲ್ಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ ಆಗ್ರಹಿಸಿದರು.
ಇನ್ನು ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಪ್ರತಿಕ್ರಿಯಿಸಿದ ತಾಲ್ಲೂಕು ಅರೋಗ್ಯ ವೈದ್ಯಧಿಕಾರಿ ವೆಂಕಟಪ್ಪ ನಾಯಕ ಅವರು, ಕಲುಷಿತ ನೀರಿನಿಂದ ವಾಂತಿ-ಭೇದಿ ಸಂಭವಿಸಿದೆ. ಈಗಾಗಲೇ ರೋಗಿಗಳಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಅಲ್ಲಿಗೆ ಆಂಬುಲೆನ್ಸ್ ಹಾಗೂ ಸಿಬ್ಬಂದಿ ಕಳಿಸಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದರು.
ಅಲ್ಲದೇ ಸ್ವಚ್ಛತೆ ಬಗ್ಗೆ ಗ್ರಾಪಂ ಸಿಬ್ಬಂದಿ ಗಮನಹರಿಸಿದ್ದು, ಎಲ್ಲಾ ರೀತಿ ಕ್ರಮ ಕೈಗೊಂಡಿದ್ದಾರೆ ಅಂತಾ ಹೇಳಿದರು.
-ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
PublicNext
14/09/2021 03:55 pm