ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಏಟಿಗೆ ಎದುರೇಟು : ಯುಕೆ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ

ನವದೆಹಲಿ: ಸೋಮವಾರದಿಂದ ಭಾರತಕ್ಕೆ ಆಗಮಿಸುವ ಎಲ್ಲಾ ಬ್ರಿಟಿಷ್ ನಾಗರಿಕರು ಲಸಿಕೆಯ ಎರಡು ಡೋಸ್ ಲಸಿಕೆ ಪಡೆದಿದ್ದರೂ ಕಡ್ಡಾಯವಾಗಿ 10 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಲೇಬೇಕು ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ಪಡೆದ ಭಾರತೀಯರಿಗೆ ಇಂಗ್ಲೆಂಡ್ ನಲ್ಲಿ 10 ದಿನಗಳ ಕಾಲ ಕ್ವಾರಂಟೈನ್ ವಿಧಿಸಲಾಗಿತ್ತು. ಇದಕ್ಕೆ ಭಾರತದಿಂದ ವಿರೋಧ ವ್ಯಕ್ತವಾದರೂ ಇಂಗ್ಲೆಂಡ್ ತನ್ನ ನಿರ್ಧಾರವನ್ನು ಬದಲಾಯಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್ನಿಂದ ಭಾರತಕ್ಕೆ ಆಗಮಿಸುವವರಿಗೆ ಕೂಡ 10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸುವ ಮೂಲಕ ಭಾರತ ತಿರುಗೇಟು ನೀಡಿದೆ.

ಭಾರತ ಪ್ರಯಾಣಕ್ಕೆ 72 ಗಂಟೆ ಮುಂಚಿತವಾಗಿ RT-PCR ಪರೀಕ್ಷೆಗೆ ಒಳಗಾಗಬೇಕು. ಭಾರತಕ್ಕೆ ಬಂದ ತಕ್ಷಣವೇ ಏರ್ ಪೋರ್ಟ್ ನಲ್ಲಿ RT-PCR ಪರೀಕ್ಷೆಗೆ ಒಳಗಾಗಬೇಕು. ಲಸಿಕೆ ಪಡೆದಿರಲಿ, ಪಡೆಯದೇ ಇರಲಿ, RT-PCR ಪರೀಕ್ಷೆ, ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಭಾರತದ ನಾಗರಿಕರು ಇಂಗ್ಲೆಂಡ್ ಪ್ರಯಾಣಕ್ಕೆ ಇಂಗ್ಲೆಂಡ್ ಇದೇ ನಿಯಮ ಜಾರಿ ಮಾಡಿತ್ತು. ಹೀಗಾಗಿ ಇಂಗ್ಲೆಂಡ್ ನಿಯಮಕ್ಕೆ ಪ್ರತಿಯಾಗಿ ಭಾರತದಿಂದ ಅದೇ ನಿಯಮ ಜಾರಿ ಮಾಡಿದೆ.

Edited By : Nirmala Aralikatti
PublicNext

PublicNext

01/10/2021 08:13 pm

Cinque Terre

43.52 K

Cinque Terre

15