ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಶಿಷ್ಯವೇತನಕ್ಕೆ ಆಗ್ರಹಿಸಿ ಜೆಜೆಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಂದ ಡಿಫರೆಂಟ್ ಪ್ರೊಟೆಸ್ಟ್..?

ದಾವಣಗೆರೆ: ಕಳೆದ ಐದು ತಿಂಗಳಿನಿಂದ ಬಾಕಿ ನೀಡಬೇಕಿರುವ ಶಿಷ್ಯ ವೇತನ ನೀಡುವಂತೆ ಆಗ್ರಹಿಸಿ ನಗರದ ಜೆಜೆಎಂ‌‌ ಮೆಡಿಕಲ್‌ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ನಗರದ ಜಯದೇವ ವೃತ್ತದಲ್ಲಿ ಬೀದಿ ನಾಟಕ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ವಿಧ್ಯಾರ್ಥಿಗಳು ತಮಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ಸಲುವಾಗಿ ಬೀದಿ‌ ನಾಟಕ ಪ್ರದರ್ಶಿಸಿದರು. ಸಿಇಟಿ ಮೂಲಕ ಸರ್ಕಾರಿ ಕೋಟಾದಡಿ ಆಯ್ಕೆಯಾಗಿರುವ ಜೆಜೆಎಂಎಂಸಿ ವಿದ್ಯಾರ್ಥಿಗಳು ನಗರದ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ರಾಜ್ಯ ಸರ್ಕಾರವೇ ಶಿಷ್ಯವೇತನ ನೀಡುತಿತ್ತು. ಆದ್ರೆ ಕಳೆದ ಐದು ತಿಂಗಳಿನಿಂದ ಶಿಷ್ಯವೇತನ ಬಿಡುಗಡೆ ಮಾಡಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಅಳಲು ತೋಡಿಕೊಂಡರು.

ಕಾಲೇಜಿನ ಆಡಳಿತ ಮಂಡಳಿ ಹಾಗೂ ಸರ್ಕಾರದ ಸಂಬಂಧಿಸಿದ ಇಲಾಖೆಗೆ ಮನವಿ ಮಾಡಿದ್ದರೂ ಪ್ರಯೋಜನ ಆಗಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು ಪತ್ರ ಹಾಗೂ ಮನವಿ ಪತ್ರ ಸಲ್ಲಿಕೆ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ಇದರಿಂದ ಬೇಸತ್ತು ಈಗ ಹೋರಾಟದ ಹಾದಿ ತುಳಿಯುವಂತಾಗಿದೆ‌. ಕೊರೊನಾದಂತ ಸಂಕಷ್ಟದ ವೇಳೆಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡಿದ್ದೇವೆ. ಹಗಲಿರುಳು ಕಷ್ಟಪಟ್ಟಿದ್ದೇವೆ‌. ಈಗ ಕೊರೊನಾ ಕಡಿಮೆಯಾಗಿದೆ‌. ಈ ಹಿನ್ನೆಲೆಯಲ್ಲಿ ನಿರ್ಲಕ್ಷಿಸಲಾಗುತ್ತಿದೆ. ಕೋವಿಡ್ ವಿರುದ್ಧದ ಕೆಲಸ ಮಾಡುವ ವೈದ್ಯರಿಗೆ ಸಕಾಲಕ್ಕೆ ವೇತನ ಪಾವತಿ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಕೋರ್ಟ್ ನಿರ್ದೇಶನ ನೀಡಿದೆ. ಆದರೂ ಕಳೆದ ಐದು ತಿಂಗಳಿನಿಂದ ವೇತನ ಪಾವತಿಸಿಲ್ಲ ಎಂದು ಆರೋಪಿಸಿದ ವಿದ್ಯಾರ್ಥಿಗಳು, ಮುಂಬರುವ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ‌ ನೀಡಿದರು.

Edited By : Manjunath H D
PublicNext

PublicNext

03/10/2021 04:35 pm

Cinque Terre

72.16 K

Cinque Terre

0