ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು, ಸಂಬಂಧಿಕರ ಆರೋಪ

ಚಿತ್ರದುರ್ಗ : ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯು ವೈದ್ಯರ ನಿರ್ಲಕ್ಷ್ಯ ದಿಂದ ಮೃತಟಪಟ್ಡಿದ್ದಾರೆ ಎಂದು ಆರೋಪಿಸಿ, ಮಹಿಳೆಯ ಸಂಬಂಧಿಕರು ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ತಪ್ಪಗಾನಹಳ್ಳಿ ಗ್ರಾಮದ ಸುರೇಶ್ ಅವರ ಪತ್ನಿ ಮಾನಸ ಅವರನ್ನು ಚಿತ್ರದುರ್ಗ ನಗರದ ಜೆಸಿಆರ್ ಬಡಾವಣೆಯ ಉದಯ ನರ್ಸಿಂಗ್ ಹೋಂಗೆ ಹೆರಿಗೆಗಾಗಿ ದಾಖಲಿಸಲಾಗಿತ್ತು. ಆದರೆ ವೈದ್ಯರು ಸರಿಯಾದ ಚಿಕಿತ್ಸೆ ಕೊಡದೆ ಪರಿಸ್ಥಿತಿ ಗಂಭೀರವಾದ ಮೇಲೆ ಬಸವೇಶ್ವರ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಆದರೆ ಮಾನಸ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಆದರೆ ಉದಯ ನರ್ಸಿಂಗ್ ಹೋಂ ನವರು ಈ ಆರೋಪವನ್ನು ತಳ್ಳಿ ಹಾಕಿದ್ದು,

ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿಸುವಾಗ ಮಹಿಳೆಗೆ ರಕ್ತದೊತ್ತಡ ಕಡಿಮೆಯಾಗುವುದರ ಜೊತೆಗೆ ಫಿಡ್ಸ್ ಬಂದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಉದಯ್ ನರ್ಸಿಂಗ್ ಹೋಂ ಸಿಬ್ಬಂದಿ ಸಮಜಾಯಿಷಿ ನೀಡಿದ್ದಾರೆ.

Edited By : Nagesh Gaonkar
PublicNext

PublicNext

08/10/2021 03:21 pm

Cinque Terre

40.91 K

Cinque Terre

0