ಸದ್ಯ ಚಳಿಗಾಲ ಶುರುವಾಗಿದೆ. ಚಳಿಗಾಲದಲ್ಲಿ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸುವುದರಿಂದ ಅನಾರೋಗ್ಯಕ್ಕೆ ಒಳಗಾಗುವುದನ್ನು ತಪ್ಪಿಸಬಹದು.
•ಸಮತೋಲಿತ ಮತ್ತು ಪೌಷ್ಟಿಕ ಆಹಾರವನ್ನು ತೆಗೆದುಕೊಳ್ಳಿ. ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
•ಚಳಿಗಾಲದಲ್ಲಿ ಒಣ ತ್ವಚೆಯ ಸಮಸ್ಯೆ ಹೆಚ್ಚು ಹಾಗಾಗಿ ತ್ವಚೆಯ ಆರೈಕೆಗೆ ವಿಶೇಷ ಗಮನ ನೀಡುವುದು ಮುಖ್ಯ. ತಪ್ಪದೆ ಮಾಯಿಶ್ಚರೈಸರ್ ಮತ್ತು ಸನ್ ಪ್ರೊಟೆಕ್ಷನ್ ಕ್ರೀಮ್ ಬಳಸಿ.
•ಈ ಸಮಯದಲ್ಲಿ ದಿನವಿಡೀ ಸಾಕಷ್ಟು ಪ್ರಮಾಣದ ನೀರು ಕುಡಿಯಿರಿ. ಇದು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ದೇಹದಲ್ಲಿನ ದ್ರವಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಕಷ್ಟು ಪ್ರಮಾಣದ ನೀರನ್ನು ಕುಡಿಯುವುದು ಅಗತ್ಯ.
•ಪ್ರತಿರಕ್ಷಣಾ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಾಕಷ್ಟು ನಿದ್ರೆ ಮಾಡುವುದು ಅಗತ್ಯವಾಗಿದೆ.
•ಈ ಋತುವಿನಲ್ಲಿ ಹೃದಯಾಘಾತದ ಅಪಾಯವೂ ಹೆಚ್ಚಾಗುತ್ತದೆ. ಯಾವುದೇ ಗಂಭೀರ ಸಮಸ್ಯೆಯಾಗದಂತೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ.
•ಧೂಮಪಾನವು ನಿಮಗೆ ಉಸಿರಾಟದ ತೊಂದರೆಗಳನ್ನು ಉಂಟುಮಾಡಬಹುದು. ಚಳಿಗಾಲದಲ್ಲಿ ಇದರ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ಧೂಮಪಾನದಿಂದ ದೂರವಿದ್ದರೆ ಅಥವಾ ತ್ಯಜಿಸುವುದು ಉತ್ತಮ.
•ದೇಹಕ್ಕೆ ಸಾಕಷ್ಟು ಪ್ರಮಾಣದ ವಿಟಮಿನ್ ಡಿ ಅತ್ಯಗತ್ಯ.
•ನಿಯಮಿತ ವ್ಯಾಯಾಮ ಮತ್ತು ದೈಹಿಕ ಚಟುವಟಿಕೆ ಕೂಡ ಆರೋಗ್ಯಕ್ಕೆ ಬಹಳ ಮುಖ್ಯ.
PublicNext
12/11/2021 02:13 pm