ದಾವಣಗೆರೆ: ಮದುವೆ ಊಟ ಮಾಡಿ 150 ಕ್ಕೂ ಹೆಚ್ಚು ಜನ ಅಸ್ವಸ್ಥವಾಗಿರುವ ಘಟನೆ ಹೊನ್ನಾಳಿ ತಾಲೂಕಿನ ಹಳೇ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಂದ್ರಪ್ಪ ಎನ್ನುವವರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರಿಗೆ ಊಟ ಮಾಡಿದ ನಂತರ ವಾಂತಿ ಭೇದಿ ಶುರುವಾಗಿದೆ
ತಕ್ಷಣ ಅಸ್ವಸ್ಥರನ್ನು ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹತ್ತು ಜನ ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಇನ್ನು ಸ್ಥಳಕ್ಕೆ ಹೊನ್ನಾಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
13/11/2021 04:14 pm