ಚಿತ್ರದುರ್ಗ: ಲಸಿಕೆ ಹಾಕಿಸಿಕೊಳ್ಳಿ ಅಂತ ಹೊಲಕ್ಕೆ ಹೋದ ಆರೋಗ್ಯ ಸಿಬ್ಬಂದಿ ಮೇಲೆ ಮಹಿಳೆಯೊಬ್ಬಳು ಮಾರಕಾಸ್ತ್ರ ಎತ್ತಿ ಹೆದರಿಸಿ, ಅವಾಚ್ಯ ಪದಗಳಿಂದ ನಿಂದಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮೊಳಕಾಲ್ಮೂರು ತಾಲೂಕಿನ ಉಚ್ಚಂಗಿದುರ್ಗ ಗ್ರಾಮದ ಹೊರ ವಲಯದ ಜಮೀನಿನಲ್ಲಿ ಮಹಿಳೆಯರು, ಪುರುಷರು ಕಳೆ ತೆಗೆಯುತ್ತಿದ್ದರು. ಈ ವೇಳೆ ಅಲ್ಲಿಗೆ ಹೋದ ಆರೋಗ್ಯ ಸಿಬ್ಬಂದಿ ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ತಿಳಿಸಿದ್ದಾರೆ. ಆದರೆ ಮಹಿಳೆಯೊಬ್ಬರು ನಾನು ಸತ್ತರೂ ವ್ಯಾಕ್ಸಿನ್ ಹಾಕಿಸಿಕೊಳ್ಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ. ಅಷ್ಟೇ ಅಲ್ಲದೆ ಕಳೆ ತೆಗೆಯುವ ಕುಡುಮಳದಿಂದ ಹಲ್ಲೆ ಮಾಡಲು ಮುಂದಾಗಿದ್ದಾಳೆ. ಇದರಿಂದ ಲಸಿಕೆ ನೀಡಲು ಜಮೀನಿಗೆ ಬಂದಿದ್ದ ಆರೋಗ್ಯ ಸಿಬ್ಬಂದಿ ಗಾಬರಿಯಾಗಿ ವಾಪಸ್ ಹೋಗಿದ್ದಾರೆ.
PublicNext
17/11/2021 02:14 pm