ಮುಂಬೈ: ಕರ್ನಾಟಕ, ಗುಜರಾತ್ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಶನಿವಾರ ಓಮಿಕ್ರಾನ್ ಸೋಂಕಿನ ಮೊದಲ ಪ್ರಕರಣ ವರದಿಯಾಗಿದೆ.
ಇತ್ತೀಚೆಗಷ್ಟೆ ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಡೋಂಬಿವಿಲಿ-ಕಲ್ಯಾಣ ಎಂಬಲ್ಲಿಯ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್‌ನ ರೂಪಾಂತರ ಮಾದರಿಯಾದ ಓಮಿಕ್ರಾನ್‌ನ ಸೋಂಕು ತಗುಲಿರುವುದು ದೃಢವಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಪತ್ತೆಯಾದ ಮೊತ್ತಮೊದಲ ಓಮಿಕ್ರಾನ್ ಸೋಂಕು ಪ್ರಕರಣ ಇದಾಗಿದೆ. ದೇಶದಲ್ಲಿ ಈವರೆಗೂ ಪತ್ತೆಯಾದ ನಾಲ್ಕನೇ ಪ್ರಕರಣವಿದು.
PublicNext
04/12/2021 08:34 pm