ಚಿಕ್ಕಮಗಳೂರು: ನಗರದ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಶಾಲೆಯ 40 ಮಂದಿಗೆ ಕೋವಿಡ್ ದೃಢಪಟ್ಟಿದೆ.
ಸಿಗೋಡು ಜವಾಹರಲಾಲ್ ನವೋದಯ ವಿದ್ಯಾಲಯದಲ್ಲಿ ಸೋಂಕು ಪತ್ತೆಯಾಗಿದ್ದು, ಶಾಲೆಯನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ. ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ ಸುಮಾರು 418 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಗೆ ಕೊರೊನಾ ದಾಳಿ ಮಾಡಿದೆ. ಸದ್ಯ ಶಾಲೆಗೆ ಡಿ.ಹೆಚ್.ಓ.ಆರೋಗ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
05/12/2021 08:30 am