ಬೆಂಗಳೂರು: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕನೂರಿನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ 14 ಮಂದಿ ಪೈಕಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಒಬ್ಬರೇ ಬದುಕುಳಿದಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಸೂಲೂರು ಏರ್‌ಬೇಸ್‌ನಿಂದ ವಿಶೇಷ ಏರ್ ಆಂಬ್ಯುಲೆನ್ಸ್ ಮೂಲಕ HAL ವಿಮಾನ ನಿಲ್ದಾಣಕ್ಕೆ ತರಲಾಯಿತು. HAL ವಿಮಾನ ನಿಲ್ದಾಣದಿಂದ ಕಮ್ಯಾಂಡೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ದೇಹದ ಬಹುತೇಕ ಭಾಗ ಸುಟ್ಟು ಹೋಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
PublicNext
09/12/2021 05:33 pm