ದಾವಣಗೆರೆ: ಜಿಲ್ಲೆಯ ಜಗಳೂರು ಪಟ್ಟಣದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿಷಾಹಾರ ಸೇವಿಸಿದ ಪರಿಣಾಮ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿದ್ಯಾರ್ಥಿ ನಿಲಯದಲ್ಲಿ ಒಟ್ಟು 95 ವಿದ್ಯಾರ್ಥಿನಿಯರಿದ್ದರು. ಬೆಳಿಗ್ಗೆ ಚಪಾತಿ, ಬೀಟ್ರೋಟ್ ಪಲ್ಯ ಊಟ ಮಾಡಿದ್ದರು. ಅಲ್ಲದೇ, ಗುರುವಾರ ಬೆಳಿಗ್ಗೆ ಅವಲಕ್ಕಿ ಸೇವಿಸಿದ್ದ ವಿದ್ಯಾರ್ಥಿನಿಯರು ರಾತ್ರಿ ಊಟ ಮಾಡಿದ್ದರು. ಆದ್ರೆ, ಇಂದು ಬೆಳಿಗ್ಗೆ ಚಿತ್ರನ್ನಾ ತಿಂಡಿ ಮಾಡಲಾಗಿತ್ತು. ಕೆಲವರು ಚಪಾತಿ ಮತ್ತು ಬೀಟ್ರೋಟ್ ಪಲ್ಯ ಸೇವಿಸಿದ ಬಳಿಕ ಕೆಲ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಕೆಲವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರೆ, ಮತ್ತೆ ಕೆಲವರು ವಾಂತಿ ಮಾಡಿಕೊಳ್ಳಲು ಶುರು ಮಾಡಿದ್ದಾರೆ. ಗುರುವಾರವೇ ಹೊಟ್ಟೆ ನೋವಿನಿಂದ ಬಳಲುತ್ತಿದ್ದರೂ ಸಹಿಸಿಕೊಂಡಿದ್ದ ವಿದ್ಯಾರ್ಥಿನಿಯರಿಗೆ ಬೆಳಿಗ್ಗೆ ಜಾಸ್ತಿಯಾಗುತ್ತಾ ಹೋಗಿದೆ. ಒಬ್ಬರ ನಂತರ ಮತ್ತೊಬ್ಬರು
ಅಸ್ವಸ್ಥಗೊಂಡು ಅಳತೊಡಗಿದ್ದಾರೆ.
ಜಗಳೂರಿನ ಅಲ್ಪಸಂಖ್ಯಾತರ ಮೊರಾರ್ಜಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ95 ವಿದ್ಯಾರ್ಥಿನಿಯರಿದ್ದರು. ಈ ಪೈಕಿ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಎಲ್ಲರೂ ಪ್ರಾಣಾಪಾಯಿಂದ ಪಾರಾಗಿದ್ದಾರೆ. ಜೊತೆಗೆ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಯೂ ಮುಂದುವರಿದಿದೆ. ಕೆಲವರು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂಬ ಮಾಹಿತಿ ಬರುತ್ತಿದೆ. ಎಷ್ಟು ಮಕ್ಕಳು ಬಿಡುಗಡೆಯಾಗಿದ್ದಾರೆ ಎಂಬುದು ಗೊತ್ತಿಲ್ಲ. ವಿಷಾಹಾರ ಸೇವನೆಯಿಂದ ಈ ರೀತಿಯ ಸಮಸ್ಯೆ ಎದುರಾಗಿರಬಹುದು. ವಿದ್ಯಾರ್ಥಿನಿಯರು ಒಮ್ಮೆಲೆ ಆತಂಕಕ್ಕೆ ಒಳಗಾಗಿದ್ದರು. ಆದ್ರೆ, ಈಗ ಚಿಕಿತ್ಸೆ ಬಳಿಕ ದೃಢವಾಗಿದ್ದಾರೆ ಎಂದು ಜಗಳೂರು ತಾಲೂಕು ಆರೋಗ್ಯಾಧಿಕಾರಿ ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ.
PublicNext
17/12/2021 06:58 pm