ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಸ್ನಾನದ ಕೋಣೆಯಲ್ಲಿ ಆಯ ತಪ್ಪಿ ಬಿದ್ದು ಮೂಳೆ ಮುರಿತಕ್ಕೊಳಗಾಗಿದ್ದಾರೆ.
ಕೂಡಲೇ ಅವರನ್ನು ಚಿಕ್ಕೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಕನ್ಹೇರಿ ಮಠದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದಲ್ಲಿ ಆಧ್ಯಾತ್ಮಿಕ ಪ್ರವಚನ ಸೇವಾ ಸಮಿತಿಯಿಂದ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ನಂತರ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಜೆ ವಾಸ್ತವ್ಯ ಒದಗಿಸಿದ್ದ ಮಗದುಮ್ ಅವರ ತೋಟದ ಮನೆಗೆ ಮರಳಿದ್ದರು. ಸ್ನಾನದ ಕೋಣೆಗೆ ತೆರಳಿದ್ದಾಗ ಆಯ ತಪ್ಪಿ ಬಿದ್ದಿದ್ದಾರೆ. ಈ ವೇಳೆ ಶ್ರೀಗಳ ಬಲಭುಜ ಹಾಗೂ ತೊಡೆಯ ಮೇಲ್ಭಾಗದ ಮೂಳೆ ಮುರಿತವಾಗಿದೆ ಎಂಬ ಮಾಹಿತಿ ದೊರೆತಿದೆ.
PublicNext
10/01/2022 11:02 pm