ದಾವಣಗೆರೆ: ವಿಷಾಹಾರ ಸೇವಿಸಿದ ಪರಿಣಾಮ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಯಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದಿದೆ.
50 ಕ್ಕೂ ಹೆಚ್ವು ಮಕ್ಕಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾತ್ರಿ ಊಟ ಸೇವಿಸಿದ್ದ ವಿದ್ಯಾರ್ಥಿನಿಯರು ಸುಸ್ತಾದರು. ಕೂಡಲೇ ವಾಹನ ವ್ಯವಸ್ಥೆ ಮಾಡಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಮಕ್ಕಳು ಅಸ್ವಸ್ಥರಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಹೊನ್ನಾಳಿ ಶಾಸಕರೂ ಆದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಬೆಂಗಳೂರಿನಿಂದ ನೇರವಾಗಿ ವಸತಿ ಶಾಲೆ ಭೇಟಿ ನೀಡಿದರು. ವಸತಿ ಶಾಲೆಯಲ್ಲಿನ ಮಕ್ಕಳ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. ನಂತರ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಆತಂಕಪಡಬೇಡಿ ಎಂದರು.
ಮಕ್ಕಳಿಗೆ ಔಷಧೋಪಚಾರ ಮಾಡುವಂತೆ ಆರೋಗ್ಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ ರೇಣುಕಾಚಾರ್ಯ ಆಸ್ಪತ್ರೆಯಲ್ಲೇ ಇದ್ದು ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚನೆ ನೀಡಿದರು.
PublicNext
15/01/2022 09:39 am