ಬೆಂಗಳೂರು: ಶಸ್ತ್ರಚಿಕಿತ್ಸೆಯಲ್ಲಿ ತೊಡಗಿದ್ದ ನಗರದ ಮಣಿಪಾಲ್ ಆಸ್ಪತ್ರೆಯ ಖ್ಯಾತ ನ್ಯೂರೋ ಸರ್ಜನ್ ಡಾ. ವೇಣುಗೋಪಾಲ್ ಅವರು ಕಾರ್ಡಿಯಾಕ್ ಅರೆಸ್ಟ್ನಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ನಗರದ ಆಸ್ಪತ್ರೆಯೊಂದರಲ್ಲಿ ಬೆಳಿಗ್ಗೆಯಿಂದ ಶಸ್ತ್ರಚಿಕಿತ್ಸೆಯಲ್ಲಿ ತೊಡಗಿದ್ದ ಅವರು, ಮೊದಲ ಶಸ್ತ್ರಚಿಕಿತ್ಸೆಯನ್ನು ಮುಗಿಸಿ 2ನೇ ಸರ್ಜರಿಗೆ ತಯಾರಿಯಲ್ಲಿದ್ದರು. ಈ ವೇಳೆ ಹೃದಯ ಸ್ಥಂಭನಕ್ಕೆ ತುತ್ತಾಗಿ ಕೊನೆಯುಸಿರೆಳೆದಿದ್ದಾರೆ.
ಡಾ. ವೇಣುಗೋಪಾಲ್ ಅವರಿಗೆ 43 ವರ್ಷ ವಯಸ್ಸಾಗಿತ್ತು. ಇತ್ತೀಚಿಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ಅದರಿಂದ ಗುಣಮುಖರಾಗಿ ಚೇತರಿಸಿಕೊಳ್ಳುತ್ತಿದ್ದರು. ಖ್ಯಾತ ವೈದ್ಯ ಡಾ. ವೇಣುಗೋಪಾಲ್ ಅವರ ಅಕಾಲಿಕ ನಿಧನಕ್ಕೆ ಗಣ್ಯರು, ವೈದ್ಯರು, ಸಿಬ್ಬಂದಿ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
PublicNext
22/01/2022 07:02 pm