ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ ಕೊರೊನಾ ಮತ್ತೆ ಏರಿಕೆ: ಇಂದು 4,270 ಕೇಸ್‌ ದೃಢ, 15 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು (ಭಾನುವಾರ) ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 4,270 ಜನರಿಗೆ ಸೋಂಕು ದೃಢಪಟ್ಟಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,76,817ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್‌ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,692ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,052ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,619 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,28,073ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,45,814 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,22,09,788 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Edited By : Vijay Kumar
PublicNext

PublicNext

05/06/2022 10:38 am

Cinque Terre

44.52 K

Cinque Terre

1

ಸಂಬಂಧಿತ ಸುದ್ದಿ