ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾತಪೂರ ಗ್ರಾಮದಲ್ಲಿ ಇದ್ದಕ್ಕಿದ ಹಾಗೆ ಸುಮಾರು 30 ರಿಂದ 40 ಜನ ವಾಂತಿ ಭೇದಿಯಿಂದ ಬಳಲಿ ಆಸ್ಪತ್ರೆ ಪಾಲಾಗಿದ್ದಾರೆ.
ಸಾತಪೂರ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆಯಿಂದ ಗ್ರಮಸ್ಥರಿಗೆ ವಾಂತಿ ಭೇದಿ ಶುರುವಾಗಿದೆ. ಕೂಡಲೇ ಗ್ರಾಮಸ್ಥರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಏಕಾಏಕಿ ಜನರಿಗೆ ಸಮಸ್ಯೆ ಕಾಡಲು ಕುಡಿಯುವ ನೀರು ಕಲುಷಿತಗೊಂಡಿರರಬಹುದೆಂದು ಶಂಕಿಸಲಾಗಿದೆ.
ಸದ್ಯ ಗ್ರಾಮದಲ್ಲಿನ ನೀರನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ.ನೀರಿನ ಪರೀಕ್ಷಾ ವರದಿ ಬಂದ ಬಳಿಕ ಸಮಸ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.
ಇನ್ನು ಇಂಡಿ ತಾಲೂಕಾ ಆಸ್ಪತ್ರೆಗೆ ಸ್ಥಳೀಯ ಶಾಸಕ ಯಶವಂತರಾಯಗೌಡ ಪಾಟೀಲ್ ಭೇಟಿ ನೀಡಿ ವಾಂತಿ ಭೇದಿಯಿಂದ ಬಳಲುತ್ತಿರುವ ಗ್ರಾಮಸ್ಥರಿಗೆ ಧೈರ್ಯ ಹೇಳಿದ್ದಾರೆ.
ಜೊತೆಗೆ ಸೂಕ್ತ ಚಿಕಿತ್ಸೆ ನೀಡಿ ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ವೈದ್ಯರಿಗೆ ವೈದ್ಯರಿಗೆ ಸೂಚನೆ ಸೂಚನೆ ನೀಡಿದ್ದಾರೆ.
PublicNext
03/07/2022 09:40 pm