ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಹಡಪದ ಅಪ್ಪಣ್ಣ ಜಯಂತಿ ಹಿನ್ನೆಲೆ ರಕ್ತದಾನ ಶಿಬಿರ ಕಾರ್ಯಕ್ರಮ

ಹಾವೇರಿ: ಜಿಲ್ಲೆಯ ಸವಣೂರ ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು. ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಸಮಾಜದ ಮುಖಂಡರು ಸಮಾಜಸೇವಾ ದೃಷ್ಟಿಯಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದರು.

ಈ ವೇಳೆ ಹಲವಾರು ವ್ಯಕ್ತಿಗಳು ಬೇರೆಯವರ ಜೀವ ಉಳಿವಿಗಾಗಿ ತಮ್ಮ ಅಮೂಲ್ಯವಾದ ರಕ್ತವನ್ನು ದಾನ ಮಾಡಿದರು. ಒಟ್ಟಾರೆ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಪದಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವೈದ್ಯಾಧಿಕಾರಿಗಳು ತಹಶೀಲ್ದಾರ ಕಚೇರಿಯ ಸಿಬ್ಬಂದಿ ಹಾಗೂ ಅಧಿಕಾರಿಗಳು ರಕ್ತದಾನಿಗಳು ಪ್ರಮುಖರು ಪಾಲ್ಗೊಂಡಿದ್ದರು.

Edited By :
PublicNext

PublicNext

13/07/2022 01:52 pm

Cinque Terre

18.46 K

Cinque Terre

0