ಭೋಪಾಲ್: ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿಯ ಮಹಾ ಎಡವಟ್ಟಿನಿಂದ ಗರ್ಭಿಣಿಯೊಬ್ಬರು ಆಸ್ಪತ್ರೆಯ ಕಾಂಪೌಂಡ್ ಪಕ್ಕದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ರತ್ಲಾಮ್ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ನೆಟ್ಟಿಗರು ಆಗ್ರಹಿಸಿದ್ದಾರೆ.
ರತ್ಲಾಮ್ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ರಜೆ ತೆಗೆದುಕೊಂಡಿದ್ದರಿಂದ ಸಿಬ್ಬಂದಿ ಆರೋಗ್ಯ ಕೇಂದ್ರಕ್ಕೆ ಬೀಗ ಹಾಕಿ ಮನೆಗೆ ತೆರಳಿದ್ದರು. ಈ ವೇಳೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ರತ್ಲಾಮ್ ಜಿಲ್ಲೆಯ ಬುಡಕಟ್ಟು ಪ್ರದೇಶದ ಕುಂದನ್‌ಪುರದ ಗರ್ಭಿಣಿ ಆಸ್ಪತ್ರೆಗೆ ಆಗಮಿಸಿದ್ದರು. ಆದರೆ ಆಸ್ಪತ್ರೆಗೆ ಕೀ ಹಾಕಿದ್ದರಿಂದ ಕಾಂಪೌಂಡ್ ಪಕ್ಕದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.
ಘಟನೆ ಬೆನ್ನಲ್ಲೇ ಸ್ಥಳಕ್ಕಾಗಮಿಸಿರುವ ವೈದ್ಯಕೀಯ ಸಿಬ್ಬಂದಿ ಮಹಿಳೆ ಹಾಗೂ ಮಗುವನ್ನು ಬೇರೊಂದು ಜಾಗಕ್ಕೆ ಸ್ಥಳಾಂತರ ಮಾಡಿ, ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಸಹ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆ ಬಿಎಂಒ ಡಾ. ಜೈಸ್ವಾಲ್ ಅವರನ್ನು ಪ್ರಶ್ನೆ ಮಾಡಿದಾಗ ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದು, ಜಿಲ್ಲಾ ವೈದ್ಯಾಧಿಕಾರಿ ಕಡೆ ಬೊಟ್ಟು ಮಾಡಿದ್ದಾರೆ. ಆರೋಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
PublicNext
13/08/2022 09:43 pm