ಕೊಲಂಬೊ : ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ವೈದ್ಯಕೀಯ ನೆರವು ಕೋರಿ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಕಳೆದ ಆಗಸ್ಟ್ 7ರಂದೇ ನಿತ್ಯಾನಂದ ಕೈಲಾಸ ಸಾರ್ವಭೌಮ ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯದ ಕೊರೆತೆಯನ್ನು ಉಲ್ಲೇಖಿಸಿ ಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದರು. ನಾನು ಅಸ್ವಸ್ಥನಾಗಿದ್ದೇನೆ, ಜೀವಕ್ಕೆ ಅಪಾಯವಿದ್ದು, ತುರ್ತು ಚಿಕಿತ್ಸೆಯ ಅವಶ್ಯಕತೆಯಿದೆ. ಕೂಡಲೇ ವೈದ್ಯಕೀಯ ಅಗತ್ಯತೆಗಳನ್ನು ಪೂರೈಸುವಂತೆ ಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರಿಗೆ ಕೋರಿದ್ದರು.
ಹೌದು ಆಸ್ಟ್ರೇಲಿಯಾ ಸಮೀಪದ ದ್ವೀಪವೊಂದನ್ನು ಖರೀದಿಸಿ (ಕೈಲಾಸ ದೇಶ) ಅಲ್ಲಿರುವ ನಿತ್ಯಾನಂದ,ಇಲ್ಲಿ ವೈದ್ಯಕೀಯ ಸೌಲಭ್ಯಗಳಿಲ್ಲ. ತುರ್ತಾಗಿ ಚಿಕಿತ್ಸೆ ಬೇಕಾಗಿದೆ. ನೆರವು ನೀಡಿದರೆ ಆರ್ಥಿಕ ಮುಗ್ಗಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಕೋಟಿಗಟ್ಟಲೆ ಹಣ ಹೂಡಿಕೆ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
PublicNext
03/09/2022 09:31 am