ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜಿ. ಮಂಜುನಾಥ್ ಅವರನ್ನು ಬಂಧಿಸಲಾಗಿತ್ತು. ಸದ್ಯ ಅರೆಸ್ಟ್ ಆಗಿದ್ದ ಡಿಸಿಗೆ ಎಸಿಬಿ ಕೋರ್ಟ್ ಶನಿವಾರ ಷರತ್ತು ಬದ್ಧ ಜಾಮೀನು ನೀಡಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಅವರನ್ನು ಜುಲೈ 4 ರಂದು ಅರೆಸ್ಟ್ ಮಾಡಲಾಗಿತ್ತು. 2 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗುತ್ತಿದ್ಧಾರೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಅವರು ಆನೇಕಲ್ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಸಂಬಂಧ ಆದೇಶ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮೇ 21 ರಂದು 5 ಲಕ್ಷ ರೂ. ಲಂಚ ಪಡೆಯುವಾಗ ಎಸಿಬಿ ದಾಳಿ ನಡೆಸಿತ್ತು.
PublicNext
04/09/2022 12:47 pm