ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸುಮಾರು ಎರಡು ಲಕ್ಷಕ್ಕೂ ಅಧಿಕ ಪ್ರಮಾಣದ ಹಾನಿಯಾಗಿರುವ ಘಟನೆ ಹುಬ್ಬಳ್ಳಿಯ ನವನಗರದ ಆದಾಯ ತೆರಿಗೆ ಇಲಾಖೆ ಕಚೇರಿಯಲ್ಲಿ ನಡೆದಿದೆ.
ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿರುವ ಪರಿಣಾಮ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳು ಸುಮಾರು ಕಾಲ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು,ಸಂಭವಿಸಬಹುದಾದ ಭಾರಿ ಪ್ರಮಾಣದ ಅಪಘಾತ ತಪ್ಪಿಸಿದ್ದಾರೆ.
ಬೆಂಕಿ ಅವಘಡದಲ್ಲಿ ಸುಮಾರು ಎರಡು ಲಕ್ಷ ಮೌಲ್ಯದ ಉಪಕರಣ ಹಾಗೂ ಇನ್ನಿತರ ಕಡತಗಳು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ಇಲಾಖೆಯ ಡಿಎಫ್ಒ ವಿನಾಯಕ ಕಲುಟಕರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು,ಸಮಯಪ್ರಜ್ಞೆಯಿಂದ ಸಾರ್ವಜನಿಕ ಪ್ರಶಂಸೆ ಪಾತ್ರರಾಗಿದ್ದಾರೆ.
Kshetra Samachara
17/10/2020 07:07 pm