ಹುಬ್ಬಳ್ಳಿ: ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಟ್ರ್ಯಾಕ್ಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಬಳಿ ನಡೆದಿದೆ.
ರಸ್ತೆಯಲ್ಲಿ ಅಡ್ಡಲಾಗಿ ಬಂದ ಬೈಕ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸರಣಿ ಅಪಘಾತ ಸಂಭವಿಸಿದೆ.
ಕಾರು ಹುಬ್ಬಳ್ಳಿಯಿಂದ ಗದಗ ಮಾರ್ಗವಾಗಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದ್ದು,ವ್ಯಕ್ತಿಯೋರ್ವನ ಸ್ಥಿತಿ ಗಂಭೀರವಾಗಿದೆ.ವಿಜಯ ಅಣ್ಣಿಗೇರಿ ಹಾಗೂ ಲಕ್ಷ್ಮಣಗೌಡ ಉಮ್ಮನಗೌಡರ ಗಾಯಾಳುಗಳು ಎಂದು ತಿಳಿದು ಬಂದಿದೆ.ಕಾರು ವಕೀಲರಾದ ಎಚ್.ಎಸ್.ಜಡಿಯವರಿಗೆ ಸೇರಿದ್ದು ಎಂದು ಹೇಳಲಾಗುತ್ತಿದೆ.
ಇನ್ನೂ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Kshetra Samachara
24/10/2020 04:54 pm