ನರಗುಂದದಿಂದ ನವಲಗುಂದಕ್ಕೆ ಹೊರಟಿದ್ದ ಕಾರೊಂದು ಪಲ್ಟಿಯಾದ ಘಟನೆ ಬೆಳವಟಗಿ ಕ್ರಾಸ್ ಬಳಿ ಸಂಭವಿಸಿದೆ.
ರಸ್ತೆಯ ಪಕ್ಕದಲ್ಲಿ ಹಾಕಿದ್ದ ಮಣ್ಣಿನ ಗುಡ್ಡೆಯ ಮೇಲೆ ಹೋದ ಪರಿಣಾಮ ಕಾರು ಪಲ್ಟಿಯಾಗಿದೆ.
ಇನ್ನೂ ಅಶೋಕ ಹೊಸಮನಿ ಎಂಬುವವರಿಗೆ ಸೇರಿದ ವಾಹನ ಇದಾಗಿದ್ದು ಘಟನೆಯಿಂದ ಕಾರು ಹಾಳಾಗಿದೆ.
ಈ ಘಟನೆಯಿಂದಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು, ಆದ್ರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ, ಈ ಕುರಿತು ನವಲಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
01/11/2020 02:30 pm