ಚಿಕ್ಕೋಡಿ/ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದು ಆ್ಯಂಬುಲನ್ಸ್ ಪಲ್ಟಿಯಾಗಿದ್ದು, ಬೈಕ್ ಹಿಂಬದಿ ಸವಾರ ಹಾಗೂ ಆ್ಯಂಬುಲನ್ಸ್ ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೊರವಲಯದ ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಅಥಣಿ ಖಾಸಗಿ ಆಸ್ಪತ್ರೆಯಿಂದ ಬೆಳಗಾವಿಗೆ ಹೊರಟಿದ್ದ ಆ್ಯಂಬುಲನ್ಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಮಹಾರಾಷ್ಟ್ರ ಮೂಲದ 51 ವರ್ಷದ ಕೊರೊನಾ ಸೋಂಕಿತ ಹಾಗೂ ರಬಕವಿ ಮೂಲದ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿದ್ದಾರೆ.
ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
18/09/2020 11:14 pm