ಕಲಘಟಗಿ: ತಾಲೂಕಿನ ಬೆಲವಂತರ ಗ್ರಾಮದ ಬಳಿ ಬೆಡ್ತಿ ಹಳ್ಳದಲ್ಲಿ ಅನಾಮಧೇಯ ಶವ ಪತ್ತೆಯಾಗಿದೆ. ಹಳ್ಳದ ನೀರಿನಲ್ಲಿ ಅನಾಮಧೇಯ ಶವ ತೇಲಿ ಬಂದಿದ್ದು ಗ್ರಾಮದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಪೊಲೀಸ ಸಿಬ್ಬಂದಿ ಮೃತ ದೇಹವನ್ನು ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಬಗ್ಗೆಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
05/11/2020 07:44 pm