ಹುಬ್ಬಳ್ಳಿ:ಇನ್ನೋವಾ ಮತ್ತು ಬಲ್ಯಾನೋ ಕಾರು ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ ಭಾರಿ ಅಪಘಾತ ಸಂಭವಿಸಿದ್ದು,ಸ್ಥಳದಲ್ಲೇ ಇಬ್ಬರ ದುರ್ಮರಣಕ್ಕಿಡಾದ ಘಟನೆ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ಬಳಿ ನಡೆದಿದೆ.
ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಇನ್ನೂ ಮೂವರು ಸ್ಥಿತಿ ಚಿಂತಾಜನಕವಾಗಿದ್ದು,
ಗಂಭೀರ ಗಾಯಗೊಂಡ ಮೂವರೂ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರು ಮತ್ತು ಗಾಯಾಳುಗಳು ಬಲ್ಯಾನೋ ಕಾರಿನಲ್ಲಿದ್ದವರೇ.ಹುಬ್ಬಳ್ಳಿಯಿಂದ ಬಳ್ಳಾರಿಗೆ ಹೊರಟಿದ್ದ ಬಲ್ಯಾನೋ ಕಾರು.ಗದುಗಿನಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು,ಗಾಯಾಳು ಮತ್ತು ಮೃತರ ಪತ್ತೆ ಹಚ್ಚುತ್ತಿದ್ದಾರೆ.
Kshetra Samachara
20/11/2020 10:18 pm