ಹುಬ್ಬಳ್ಳಿ : ಕನ್ನಡ ಚಿತ್ರರಂಗದ ಹಿರಿಯ ನಟಿ ಉಮಾಶ್ರೀ ಅವರಿಗೆ ಸೇರಿದ ಕಾರು ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಅಪಘಾತಕ್ಕೆ ಇಡಾಗಿದ್ದು, ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದ್ದು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಟಿ ಉಮಾಶ್ರೀ ಯವರನ್ನು ಬಿಟ್ಟು ಕಾರು ಚಾಲಕ ತಮ್ಮೂರಿಗೆ ಹೊರಟಾಗ ಹುಬ್ಬಳ್ಳಿ ತಾಲೂಕಿನ ಬಂಡಿವಾಡದ ಹತ್ತಿರ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಮೂಲತಃ ಮುದ್ದೇಬಿಹಾಳದ ಶೋಭಾ ಕಟ್ಟಿ, ಹಾಗೂ ಬಲೆನೋ ಕಾರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದಾರೆ. ಹುಬ್ಬಳ್ಳಿ ಕಡೆಯಿಂದ ಬಳ್ಳಾರಿಗೆ ಹೊರಟಿದ್ದ ಬಲೆನೋ ಕಾರು ಮತ್ತು ಗದಗ ಕಡೆಯಿಂದ ಹುಬ್ಬಳ್ಳಿ ಮಾರ್ಗವಾಗಿ ಬರುತ್ತಿದ್ದ ಇನೋವಾ ಕಾರು ಮುಖಾಮುಖಿಯಾಗಿ ಈ ಅಪಘಾತ ಸಂಭವಿಸಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಮಾಹಿತಿ ನೀಡಿದ್ದಾರೆ.
Kshetra Samachara
21/11/2020 09:45 am