ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿವೇಗದ ಚಾಲನೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಗುದ್ದಿದ ಗೂಡ್ಸ್ ಲಾರಿ

ಕುಂದಗೋಳ : ಅತಿವೇಗವಾಗಿ ಚಲಿಸುತ್ತಿದ್ದ ಗೂಡ್ಸ್ ಲಾರಿಯೊಂದು ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆಯ ಪಕ್ಕದಲ್ಲಿ ಹೊರಟ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡ ಘಟನೆ ಹಾವೇರಿ ರಾಷ್ಟ್ರೀಯ ಹೆದ್ದಾರಿ ತಡಸ ಕ್ರಾಸ್ ಬಳಿ ಶನಿವಾರ ಮಧ್ಯಾಹ್ನದ ಅವಧಿಯಲ್ಲಿ ಸಂಭವಿಸಿದೆ.

ಹುಬ್ಬಳ್ಳಿಯಿಂದ ಹಾವೇರಿಗೆ ಚಲಿಸುತ್ತಿದ್ದ ಎಮ್ಎಚ್-46 ಎಆರ್-6170 ಸಂಖ್ಯೆಯ ಗೂಡ್ಸ್ ಲಾರಿಯೂ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹೊರಟಿದ್ದ ಕೆಎ-27 ಇಜೆ-4658 ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರನಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ.

Edited By : Nirmala Aralikatti
Kshetra Samachara

Kshetra Samachara

30/11/2020 11:21 am

Cinque Terre

66.45 K

Cinque Terre

2

ಸಂಬಂಧಿತ ಸುದ್ದಿ