ಹುಬ್ಬಳ್ಳಿ; ತಾಲೂಕಿನ ಹೆಬಸೂರ ಗ್ರಾಮದ ಸರಕಾರಿ ಕಾಲೇಜು ಬಳಿ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ತಡರಾತ್ರಿ ಸಂಭವಿಸಿದೆ.
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಕಾಲವಾಡ ಗ್ರಾಮದ ಬಸವರಾಜ ತಳವಾರ ಹಾಗೂ ಹನಮಂತ ಚಿಕ್ಕನರ್ತಿ ಎಂಬುವವರೇ ಸಾವಿಗೀಡಾದ ದುರ್ಧೈವಿಗಳಾಗಿದ್ದು, ಬೈಕಿನಲ್ಲಿ ಹೋಗುತ್ತಿದ್ದ ಸಮಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.ದ್ವಿಚಕ್ರ ವಾಹನಕ್ಕೆ ವೇಗವಾಗಿ ಹೋಗುತ್ತಿದ್ದ ವಾಹನ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ತಲೆಗಳು ರಸ್ತೆಗೆ ಬಡಿದು ತೀವ್ರವಾಗಿ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗ ಮಧ್ಯೆದಲ್ಲೆ ಮೃತಪಟ್ಟಿದ್ದಾರೆ.
ಸ್ಥಳೀಯರ ಮಾಹಿತಿ ಮೇರೆಗೆ ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಕಿಮ್ಸಗೆ ರವಾನೆ ಮಾಡುವ ಪ್ರಯತ್ನ ಮಾಡಿದರಾದರೂ, ಕಿಮ್ಸಗೆ ತೆರಳುವ ಮುನ್ನವೇ ಇಬ್ಬರು ಪ್ರಾಣಬಿಟ್ಟಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
13/12/2020 11:07 am