ಧಾರವಾಡ: ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಸಮೀಪದ ಬೈಲಹೊಂಗಲ ರಸ್ತೆಯಲ್ಲಿ ನಡೆದಿದೆ.
ದೊಡವಾಡ ಕಡೆಯಿಂದ ಬೈಕ್ ಸವಾರನೋರ್ವ ಇಬ್ಬರು ಮಹಿಳೆಯರನ್ನು ಕರೆದುಕೊಂಡು ಉಪ್ಪಿನ ಬೆಟಗೇರಿ ಕಡೆ ಬರುತ್ತಿದ್ದ ಸಂದರ್ಭದಲ್ಲಿ, ಎದುರಿಗೆ ಬಂದ ಬೈಕ್ ಸವಾರ ಆ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.
ಇದರಿಂದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಹೆಸರು ತಿಳಿದು ಬಂದಿಲ್ಲ.
Kshetra Samachara
23/12/2020 08:22 pm