ಧಾರವಾಡ: ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ಶೋಭಾ ಹಡಪದ ಎಂಬ ಮಹಿಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಮನಗುಂಡಿ ಗ್ರಾಮದ ಎರಡನೇ ವಾರ್ಡ್ 'ಅ' ವರ್ಗದ ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು.
ನಿನ್ನೆ ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡ ಪರಿಣಾಮ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
Kshetra Samachara
25/12/2020 09:32 pm