ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ : ರಸ್ತೆ ಅಪಘಾತ ವೃದ್ಧೆ ಸಾವು ಐವರಿಗೆ ಗಂಭೀರ ಗಾಯ

ಹಾವೇರಿ : ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಡಿಕ್ಕಿ ಹೊಡೆದು ಕಾರೊಂದು ರಸ್ತೆ ಪಕ್ಕದ ಅಂಗಡಿಗೆ ನುಗ್ಗಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ವೃದ್ಧೆ ಮೃತಪಟ್ಟಿದ್ದು, ಕಾರು ಚಾಲಕ ಹಾಗೂ ಅಂಗಡಿಯಲ್ಲಿ ನಿಂತಿದ್ದ ನಾಲ್ವರು ಸೇರಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತ ವೃದ್ದೆಯನ್ನು ಎಪ್ಪತ್ತು ಮೂರು ವರ್ಷ ವಯಸ್ಸಿನ ಉಮಾ ಹೆಗಡೆ ಅಂತಾ ಗುರುತಿಸಲಾಗಿದೆ.ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರು ಅಕ್ಕಿಆಲೂರು ಕಡೆಯಿಂದ ಹಾವೇರಿ ಕಡೆಗೆ ಹೊರಟಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

19/09/2020 11:34 am

Cinque Terre

51.12 K

Cinque Terre

1

ಸಂಬಂಧಿತ ಸುದ್ದಿ