ಕಲಘಟಗಿ:ತಾಲೂಕಿನ ಬೆಲವಂತರ ಗ್ರಾಮದ ಹತ್ತಿರ ರಾಜ್ಯ ಹೆದ್ದಾರಿಯಲ್ಲಿ ಗೂಡ್ಸ್ ವಾಹನ ಉರುಳಿ ಬಿದ್ದು ಇಬ್ಬರು ಮಹಿಳೆಯರಿಗೆ ಗಾಯವಾದ ಘಟನೆ ಮಂಗಳವಾರ ಸಂಜೆ ಜರುಗಿದೆ.
ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದಿದೆ.ಇದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರಿಗೆ ಗಾಯವಾಗಿದ್ದು,ಸ್ಥಳೀಯರು ಉಪಚರಿಸಿದ್ದಾರೆ.ನಂತರ ಕಲಘಟಗಿ ಸರಕಾರಿ ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ಒದಗಿಸಲಾಗಿದೆ.ಮಂಗಳವಾರದ ಸಂತೆ ಮುಗಿಸಿ ಮರಳುವಾಗ ಈ ಅಪಘಾತ ಸಂಭವಿಸಿದೆ. ಗಾಯಾಳುಗಳ ಹೆಸರು ತಿಳಿದು ಬಂದಿಲ್ಲ.
Kshetra Samachara
23/09/2020 01:51 pm