ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ:ಬೈಪಾಸ್ ಭೀಕರ ಅಪಘಾತ; ಕಿಮ್ಸ್‌ ನಲ್ಲೇ ಇಬ್ಬರು ಸಾವು; ನಿರ್ದೇಶಕ ಡಾ.ರಾಮಲಿಂಗಪ್ಪ ಸ್ಪಷ್ಟನೆ

ಪೂನಾ ಬೆಂಗಳೂರು ತಾರಿಹಾಳ ಬೈಪಾಸ್ ನಲ್ಲಿ ನಿನ್ನೆ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ 6 ಜನರು ಸಾವನ್ನಪ್ಪಿದ್ದು, ಕಿಮ್ಸ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆಂದು ಕಿಮ್ಸ್ ನಿರ್ದೇಶಕರಾದ ಡಾ. ರಾಮಲಿಂಗಪ್ಪ ಅಂಟರತಾನಿ ಸ್ಪಷ್ಟನೆ ನೀಡಿದ್ದಾರೆ.

ಘಟನೆ ಕುರಿತು ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ್ದು, ಒಟ್ಟು ಅಪಘಾತ ಪ್ರಕರಣದಲ್ಲಿ ಎಂಟು ಜನ ಮೃತಪಟ್ಟಿದ್ದಾರೆ.

20 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವವರಿಗೆ ಚಿಕಿತ್ಸೆ ನಡೆಯುತ್ತಿದೆ. ಐದಾರು ಜನರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ಮುಂದುವರೆದಿದೆ. ಪ್ರಾಣಾಪಾಯದಿಂದ ಪಾರಾದ ಕೆಲವರು ತಮ್ಮ ತಮ್ಮ ಊರಿಗೆ ಮರಳುತ್ತಿದ್ದಾರೆ ಎಂದರು.

Edited By :
Kshetra Samachara

Kshetra Samachara

24/05/2022 12:51 pm

Cinque Terre

38.27 K

Cinque Terre

1

ಸಂಬಂಧಿತ ಸುದ್ದಿ