ಧಾರವಾಡ: ಟ್ರ್ಯಾಕ್ಟರ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿರುವ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿಯ ಸವದತ್ತಿ ರಸ್ತೆಯಲ್ಲಿ ನಡೆದಿದೆ.
ಮುಂದೆ ಹೊರಟಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಅಂಜಿದ ಟ್ರ್ಯಾಕ್ಟರ್ ಡ್ರೈವರ್ ತನ್ನ ವಾಹನವನ್ನು ಪಕ್ಕಕ್ಕೆ ತೆಗೆದುಕೊಳ್ಳುವ ಅವಸರದಲ್ಲಿದ್ದಾಗ ಟ್ರ್ಯಾಕ್ಟರ್ ಕೂಡ ರಸ್ತೆಯಲ್ಲೇ ಪಲ್ಟಿಯಾಗಿದೆ.
ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
29/12/2020 05:39 pm