ಧಾರವಾಡ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಇಟಿಗಟ್ಟಿ ಗ್ರಾಮದ ಬಳಿ ನಡೆದಿದೆ.
ಇಟಿಗಟ್ಟಿ ಕಡೆಗೆ ಹೊರಟಿದ್ದ ಬೈಕ್ ಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
KA 25 EM 0281 ಎಂಬ ವಾಹನ ಸಂಖ್ಯೆಯ ಬೈಕ್ ಸವಾರನೇ ಈ ಅಪಘಾತದಲ್ಲಿ ಮೃತಪಟ್ಟಿದ್ದು, ಆತನ ಹೆಸರು, ವಿಳಾಸ ತಿಳಿದು ಬಂದಿಲ್ಲ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
06/01/2021 01:04 pm