ಧಾರವಾಡ: ಎದುರಿಗೆ ಬರುವ ವಾಹನ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಕಂದಕ್ಕೆ ಸಾರಿಗೆ ಸಂಸ್ಥೆ ಬಸ್ಸು ಉರುಳಿರುವ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
ಧಾರವಾಡ ಹೊರವಲಯದ ಹಳಿಯಾಳ ರಸ್ತೆಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ ಬ್ರಿಡ್ಜ್ ಸಮೀಪ ಈ ದುರ್ಘಟನೆ ನಡೆದಿದೆ. ಇನ್ನು ಈ ಘಟನೆಯಲ್ಲಿ ಚಾಲಕ ಸೇರಿ ಮೂರು ಜನರಿಗೆ ಸಣ್ಣಪುಟ್ಟ ಗಾಯಳಾಗಿವೆ ಎಂದು ಹೇಳಲಾಗುತ್ತಿದೆ. ಕೆ ಎ 27 ಎಫ್ 658 KSRTC ಬಸ್ ಹುಬ್ಬಳ್ಳಿಯಿಂದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮೂಲಕವಾಗಿ ಬೆಳಗಾವಿ ಕಡೆಗೆ ತೆರಳುತ್ತಿತ್ತು.
ಧಾರವಾಡ ಸಂಚಾರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Kshetra Samachara
09/01/2021 02:00 pm