ಧಾರವಾಡ: ಬೈಕ್ ಸವಾರರಿಬ್ಬರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಉಳವಿ ಚನ್ನಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಈ ಬೈಕ್ ಸವಾರರ ಹೆಸರು ತಿಳಿದು ಬಂದಿಲ್ಲ. ಡಿಕ್ಕಿಯ ರಭಸಕ್ಕೆ ಓರ್ವನ ಬೆನ್ನೆಲುಬು ಮುರಿದಿದ್ದು, ಇನ್ನೋರ್ವನ ತಲೆಗೆ ಪೆಟ್ಟಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ.
ಕೂಡಲೇ ಘಟನಾ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಗಾಯಾಳುಗಳಿಗೆ ನೀರು ಕುಡಿಸಿ ಆರೈಕೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಕೂಡ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡಿದರು.
Kshetra Samachara
14/01/2021 12:34 pm