ಹುಬ್ಬಳ್ಳಿ- ಲಾರಿ ಹಾಗೂ ಕಾರ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿಯ ಭಾಗ ಜಖಂಗೊಂಡಿರುವ ಘಟನೆ ನಗರದ ಹಳೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ನವಲಗುಂದಕ್ಕೆ ಹೋಗುತ್ತಿದ್ದ ಕಾರಿಗೆ ಕೊಪ್ಪಳಕ್ಕೆ ಹೋಗುವ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದ ಪರಿಣಾಮ. ಸ್ಥಳದಲ್ಲೇ ಟ್ರಾಫಿಕ್ ಜಾಮ್ ಆಗಿದ್ದರಿಂದ ಕೂಡಲೆ ಸ್ಥಳಕ್ಕೆ ಆಗಮಿಸಿದ, ಉತ್ತರ ಸಂಚಾರಿ ಠಾಣೆಯ ಪೊಲೀಸರು ಎರಡು ವಾಹನಗಳನ್ನು ಠಾಣೆಗೆ ತೆಗೆದುಕೊಂಡು ಹೋಗಿ ಬೇರೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸಧ್ಯ ಎರಡು ವಾಹನಗಳನ್ನು ಉತ್ತರ ಸಂಚಾರ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದು ಪರಿಶೀಲನೆ ಮಾಡುತ್ತಿದ್ದಾರೆ.
Kshetra Samachara
26/01/2021 08:42 pm