ಧಾರವಾಡ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ರಸ್ತೆ ಸಂಚಾರ ಅಸ್ತವ್ಯಸ್ತ ಆದ ಘಟನೆ ಧಾರವಾಡ ತಾಲೂಕಿನ ಮುಗದ ಗ್ರಾಮದ ಬಳಿ ನಡೆದಿದೆ.
ಮುಗದ ಗ್ರಾಮದಿಂದ ಬೆಳಗಾವಿಗೆ ಹೊರಟಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಟ್ರ್ಯಾಕ್ಟರ್ ಪಲ್ಟಿಯಾಗಿದ್ದರಿಂದ ಕಬ್ಬು ಕೂಡ ನೆಲಕ್ಕೆ ಬಿದ್ದಿತ್ತು. ಸ್ಥಳೀಯರ ನೆರವಿನಿಂದ ಮತ್ತೆ ಕಬ್ಬನ್ನು ಹೇರಲಾಗಿದೆ. ಇದಕ್ಕೂ ಮುನ್ನ ಜೆಸಿಬಿ ಸಹಾಯದಿಂದ ಟ್ರ್ಯಾಕ್ಟರ್ ನ್ನು ಮೇಲೆತ್ತಲಾಯಿತು.
Kshetra Samachara
29/01/2021 05:10 pm