ಧಾರವಾಡ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮಾವಿನ ತೋಟ ಬೆಂಕಿಗಾಹುತಿಯಾದ ಘಟನೆ ಧಾರವಾಡ ತಾಲೂಕಿನ ವೆಂಕಟಾಪೂರ ಗ್ರಾಮದಲ್ಲಿ ನಡೆದಿದೆ.
ಹಟೇಲ್ ಸಾಬ್ ಹಸನಸಾಬ್ ಮಾಮಲೆದಿ ಎಂಬುವವರಿಗೆ ಸೇರಿದ ಮಾವಿನ ತೋಟಕ್ಕೆ ಬೆಂಕಿ ಬಿದ್ದು, ಸಂಪೂರ್ಣವಾಗಿ ಸುಟ್ಟು ಹೋಗಿದೆ. ಇಂದು ಮಧ್ಯಾಹ್ನ ಮಾವಿನ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ.
ಹಟೇಲ್ ಸಾಬ್ ಅವರ 16 ಎಕರೆ ಮಾವಿನ ತೋಟ ಬೆಂಕಿಗೆ ಆಹುತಿಯಾಗಿದ್ದು, ರೈತ ಇದೀಗ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Kshetra Samachara
07/02/2021 10:56 am