ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ವಾಹನ ಪಲ್ಟಿ: ತಪ್ಪಿತು ಭಾರೀ ಅನಾಹುತ

ಧಾರವಾಡ: ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ವಾಹನವೊಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಬಳಿ ಪಲ್ಟಿಯಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಧಾರವಾಡ ಕಡೆಯಿಂದ ಬೆಳಗಾವಿ ಕಡೆಗೆ ಈ ವಾಹನ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ನಡು ರಸ್ತೆಯಲ್ಲೇ ಪಲ್ಟಿಯಾಗಿದೆ. ಪಲ್ಟಿಯಾದ ಪರಿಣಾಮ ಪೆಟ್ರೋಲ್ ನೆಲಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಂಡಿಲ್ಲ.

ಚಾಲಕ ಮತ್ತು ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Nagaraj Tulugeri
Kshetra Samachara

Kshetra Samachara

08/02/2021 10:33 am

Cinque Terre

43.12 K

Cinque Terre

13

ಸಂಬಂಧಿತ ಸುದ್ದಿ