ಧಾರವಾಡ: ಕಳೆದ ನಾಲ್ಕು ದಿನಗಳ ಹಿಂದೆ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
ಪರಮೇಶ್ವರ ಮೊರಬದ ಮೃತ ದುರ್ದೈವಿ.
ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯಿಂದ ಹೆಬ್ಬಳ್ಳಿ ಗ್ರಾಮಕ್ಕೆ ಬರುತ್ತಿರುವಾಗ ರಾತ್ರಿ ಬೈಕ್ ಅಪಘಾತವಾಗಿ ಪರಮೇಶ್ವರ ತೀವ್ರವಾಗಿ ಗಾಯಗೊಂಡಿದ್ದರು.ತಲೆಗೆ ಪೆಟ್ಟಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಿಸದೇ ಪರಮೇಶ್ವರ ಇಂದು ಸಾವನ್ನಪ್ಪಿದ್ದಾರೆ.
ಕುಟುಂಬಕ್ಕೆ ಆಸರೆಯಾಗಿದ್ದ ಪರಮೇಶ್ವರ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿವಾಸಿಯಾಗಿದ್ದು ಧಾರವಾಡದ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Kshetra Samachara
12/02/2021 02:03 pm