ಧಾರವಾಡ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡೂ ಕಾರುಗಳ ಮುಂಭಾಗ ಜಖಂ ಆದ ಘಟನೆ ಧಾರವಾಡದ ಎನ್ ಟಿಟಿಎಫ್ ಬಳಿ ನಡೆದಿದೆ.
ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹಾಗೂ ಹುಬ್ಬಳ್ಳಿ ಕಡೆಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಕಾರುಗಳ ಮಧ್ಯೆ ಈ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಡಿಕ್ಕಿ ರಭಸಕ್ಕೆ ಎರಡೂ ಕಾರುಗಳ ಮುಂಭಾಗ ಜಖಂ ಆಗಿದ್ದು, ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
15/02/2021 09:29 am