ನವಲಗುಂದದಲ್ಲಿ ಮನೆಗೆ ನುಗ್ಗಿದ ಮರಳು ತುಂಬಿದ ಲಾರಿ
ನವಲಗುಂದ : ತಾಲೂಕಿನ ಆರೇಕುರಹಟ್ಟಿ ಗ್ರಾಮದಲ್ಲಿ ಮರಳು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿದ ಘಟನೆ ನಡೆದಿದೆ.
ಹುಬ್ಬಳ್ಳಿಯತ್ತ ಸಾಗುತ್ತಿದ್ದ ಲಾರಿ ಏಕಾಏಕಿ ಮನೆಗೆ ನುಗ್ಗಿದೆ ಘಟನೆಯಿಂದ ಮನೆಯ ಗೋಡೆಯೊಂದು ಸಂಪೂರ್ಣವಾಗಿ ನೆಲಕಚ್ಚಿದೆ. ಇನ್ನು ದುರ್ಘಟನೆಯಿಂದ ಯಾವುದೇ ಪ್ರಾಣಹಾನಿಯಾಗಿಲ್ಲಾ ಎಂದು ತಿಳಿದುಬಂದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ನವಲಗುಂದ ಠಾಣೆ ಪೊಲೀಸರು ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.