ಧಾರವಾಡ: ಪಟಾಕಿ ಲೋಡ್ ಮಾಡಿಕೊಂಡು ಹೊರಟಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಇತ್ತೀಚೆಗಷ್ಟೇ ಹುಬ್ಬಳ್ಳಿ, ಧಾರವಾಡ ಬೈಪಾಸ್ ರಸ್ತೆಯಲ್ಲಿ ನಡೆದ ಅಪಘಾತ ಮರೆಯಾಗುವ ಮುನ್ನವೇ ಈ ಘಟನೆ ನಡೆದಿದೆ.
ಇಟಿಗಟ್ಟಿ ಬಳಿ ಬೈಪಾಸ್ ರಸ್ತೆಯ ಮೂಲಕ ಪಟಾಕಿ ತುಂಬಿದ ಲಾರಿ ಹೊರಟಿತ್ತು. ಎದುರಿಗೆ ಬಂದ ಮತ್ತೊಂದು ಲಾರಿ ಈ ಲಾರಿಗೆ ಅಲ್ಪ ಪ್ರಮಾಣದಲ್ಲಿ ಡಿಕ್ಕಿ ಹೊಡೆದಿದೆ. ಎರಡೂ ಲಾರಿಗಳ ಮಧ್ಯೆ ದೊಡ್ಡ ಪ್ರಮಾಣದಲ್ಲಿ ಡಿಕ್ಕಿ ಸಂಭವಿಸಿದ್ದರೆ, ಬೆಂಕಿ ಕಾಣಿಸಿಕೊಳ್ಳುವ ಸಂಭವವಿತ್ತು. ಅದೃಷ್ಟವಶಾತ್ ಆ ರೀತಿಯ ಯಾವುದೇ ದುರ್ಘಟನೆ ನಡೆದಿಲ್ಲ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
24/02/2021 05:25 pm